WCD Chikkamangalur Anganwadi Recruitment 2025 – ಚಿಕ್ಕಮಗಳೂರು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಸ್ಥಳೀಯ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಸ್ಥಳೀಯ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರು ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಎಲ್ಲ ಹಂತಗಳನ್ನು ಪೂರ್ಣಗೊಳಿಸಿ ಅರ್ಜಿಗಳನ್ನು ಸೆಪ್ಟೆಂಬರ್30 ರೊಳಗೆ ಸಲ್ಲಿಸಬೇಕು. ಖಾಲಿ ಹುದ್ದೆಗಳ ವಿವರ, ವಿದ್ಯಾರ್ಹತೆ, ವಯೋಮಿತಿ, ಮೀಸಲಾತಿ ಇತ್ಯಾದಿ ಹೆಚ್ಚಿನ ವಿವರಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಹಾಗೂ ಸಂಬಂಧಪಟ್ಟ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು.
ಹುದ್ದೆಗಳ ವಿವರ:
- ಪದವಿಗಳು: ಅಂಗನವಾಡಿ ಕಾರ್ಯಕರ್ತೆ & ಸಹಾಯಕಿ
- ಸ್ಥಳ: ಹಾಸನ ಜಿಲ್ಲೆಯ ವಿವಿಧ ತಾಲೂಕುಗಳ ಅಂಗನವಾಡಿ ಕೇಂದ್ರಗಳು
- ಅರ್ಹತೆ: ಶೈಕ್ಷಣಿಕ ಮಾನದಂಡಗಳನ್ನು ಈ ಕೆಳಗೆ ವಿವರಿಸಲಾಗಿದೆ
- ಆಯ್ಕೆ ವಿಧಾನ: ಲಿಖಿತ ಪರೀಕ್ಷೆ/ಮೌಖಿಕ ಪರೀಕ್ಷೆ/ಮೂಲ್ಯಮಾಪನ
ಅರ್ಹತೆ ಮತ್ತು ಅಗತ್ಯ ಮಾನದಂಡಗಳು:
- ಅಂಗನವಾಡಿ ಕಾರ್ಯಕರ್ತೆ: ಕನಿಷ್ಠ SSLC (10ನೇ ತರಗತಿ) ಪಾಸ್ ಆಗಿರಬೇಕು.
- ಅಂಗನವಾಡಿ ಸಹಾಯಕಿ: ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು.
- ಆಯ್ಕೆ ಪ್ರಕ್ರಿಯೆ: ಶೈಕ್ಷಣಿಕ ಅರ್ಹತೆ, ಸರಕಾರದ ಮಾರ್ಗದರ್ಶಿ ನಿಯಮಾವಳಿಗಳು ಮತ್ತು ಸಂದರ್ಶನ
ಅಗತ್ಯ ದಾಖಲೆಗಳು:
- ವಿದ್ಯಾರ್ಹತೆ ಪ್ರಮಾಣಪತ್ರಗಳು
- ಜನನ ಪ್ರಮಾಣಪತ್ರ (ಅಥವಾ ವಯಸ್ಸು ದೃಢೀಕರಿಸುವ ದಾಖಲೆ)
- ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್, ಮತದಾರರ ಚೀಟಿ ಇತ್ಯಾದಿ)
- ಇತರೆ ಅಗತ್ಯ ದಾಖಲೆಗಳು (ಅಧಿಕೃತ ಸೂಚನೆ ಪರಿಶೀಲಿಸಿ)
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಸಲ್ಲಿಸಬಹುದು. ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಜಿಯನ್ನು ತುಂಬಿ, ಅಗತ್ಯ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು ಅಥವಾ ನಿಗದಿತ ವಿಳಾಸಕ್ಕೆ ಕಳುಹಿಸುವುದು ಅಗತ್ಯ.
ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
- ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
- ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
- ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
- ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
- ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
- ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
- ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
- ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
- ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ, ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
- ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
- ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
- ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
- ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.
ಅವಕಾಶವನ್ನು ಕೈ ತಪ್ಪಿಸಿಕೊಳ್ಳದೆ ತಕ್ಷಣವೇ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು
ಪ್ರಾರಂಭ ದಿನಾಂಕ : 09-10-2025
ಕೊನೆಯ ದಿನಾಂಕ : 04-11-2025
ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ


