APJ Abdul Kalam Residential School Admission 2026-27 : ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆಗಳು ಸೇರಿ ರಾಜ್ಯದಾದ್ಯಂತ ಒಟ್ಟು 173 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ.

2026-27ನೇ ಸಾಲಿನಲ್ಲಿ ಪ್ರವೇಶ ಪ್ರಕ್ರಿಯೆಗಾಗಿ ಅರ್ಹವಿರುವ ವಿದ್ಯಾರ್ಥಿಗಳು ಆನ್‌ಲೈನಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ವಿಧಾನ

2026–27ನೇ ಸಾಲಿನಲ್ಲಿ ಪ್ರವೇಶಕ್ಕೆ ಅರ್ಹರಾಗಿರುವ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಮಾದರಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

 

APJ Abdul Kalam Residential School Admission ಪ್ರಮುಖ ದಿನಾಂಕಗಳು ದಿನಾಂಕಗಳು (Important Dates)

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 05-01-2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:  10-02-2026

ಅರ್ಜಿ ಸಲ್ಲಿಸುವ ವಿಧಾನ (Online Application Process)

  1. ಅರ್ಹ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ (Seva Sindhu Portal) ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
  2. ಅರ್ಜಿ ಸಲ್ಲಿಸುವ ಸೌಲಭ್ಯ ಕೆಳಗಿನ ಸ್ಥಳಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ
  3. ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ಶಾಲೆಗಳು
  4. ಅಲ್ಪಸಂಖ್ಯಾತರ ತಾಲ್ಲೂಕು ಮಾಹಿತಿ ಕೇಂದ್ರಗಳು
  5. ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿ ಕಚೇರಿಗಳು




ನೋಟಿಫಿಕೇಶನ್ : ಇಲ್ಲಿ ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು :  ಇಲ್ಲಿ ಕ್ಲಿಕ್ ಮಾಡಿ




Leave a Reply

Your email address will not be published. Required fields are marked *