Bagalkot Anganwadi worker & helper Recruitment 2024 apply Age Qualification : ಬಾಗಲಕೋಟ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ವಿವಿಧ ಕಾರಣಗಳಿಂದಾಗಿ ಖಾಲಿಯಾಗಿರುವ ಅಂಗನವಾಡಿ ಕಾರ್ಯಕರ್ತೆ/ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಆನ್ಲೈನ್ ಮೂಲಕ ಮೂಲಕ ನವೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂರ್ಪಕಿಸಬಹುದು.

Bagalkot Anganwadi worker & helper Recruitment 2024 apply Age Qualification

ವಿದ್ಯಾರ್ಹತೆ:

 ಅಂಗನವಾಡಿ ಕಾರ್ಯಕರ್ತೆದ್ವಿತೀಯ ಪಿಯುಸಿ ಪಾಸಾಗಿರಬೇಕು ಮತ್ತು ಹತ್ತನೇ ತರಗತಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು
ಅಂಗನವಾಡಿ ಸಹಾಯಕಿಹತ್ತನೇ ತರಗತಿ ಪಾಸಾಗಿರಬೇಕು.

ಹುದ್ದೆ ವಿವರ :

ಹುದ್ದೆಯ ಹೆಸರುಹುದ್ದೆಯ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ106
ಅಂಗನವಾಡಿ ಸಹಾಯಕಿ471

ವಯಸ್ಸಿನ ಮಿತಿ :

ಸಾಮಾನ್ಯ ವರ್ಗ 19 – 35 ವರ್ಷ
(ಮಿಸಲಾತಿಗನುಗುಣವಾಗಿ ಸಡಿಲಿಕೆ ನೀಡಲಾಗುವುದು)

ಅರ್ಜಿ ಶುಲ್ಕ

ಶುಲ್ಕ ವಿನಾಯಿತಿ ನೀಡಲಾಗಿರುತ್ತದೆ

ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ

ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ SSLC ಅಥವಾ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.

ಅ) ಕರ್ನಾಟಕ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಮುಕ್ತ ಶಾಲೆ/ಮುಕ್ತ ವಿದ್ಯಾಲಯಗಳಲ್ಲಿ S.S.L.C. ತೇರ್ಗಡೆ ಹೊಂದಿದ ಅಭ್ಯರ್ಥಿಗಳು ಪ್ರಥಮ/ದ್ವಿತೀಯ ಭಾಷೆಯಾಗಿ ಕನ್ನಡ ಹಾಗೂ ಸಾಮಾನ್ಯ ಗಣಿತ ಮತ್ತು ಸಮಾಜ ಶಾಸ್ತ್ರ/ಸಮಾಜ ವಿಜ್ಞಾನ ವಿಷಯಗಳನ್ನು ಕಡ್ಡಾಯವಾಗಿ ವ್ಯಾಸಂಗ ಮಾಡಿದ್ದು ಪ್ರಮಾಣ ಪತ್ರ/ಅಂಕಪಟ್ಟಿಯು ಗರಿಷ್ಠ 625 ಕನಿಷ್ಠ 219 ಅಂಕಗಳನ್ನು ಪರಿಗಣಿಸತಕ್ಕದ್ದು. ಹೊಂದಿದ್ದಲ್ಲಿ ಅಂತಹ ಅಭ್ಯರ್ಥಿಗಳನ್ನು

ಆ) ಬೇರೆ ರಾಜ್ಯಗಳಲ್ಲಿ ವ್ಯಾಸಂಗ ಮಾಡಿದ್ದು, ಕನ್ನಡವನ್ನು ಪ್ರಥಮ/ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿದ್ದರೂ SSLC ಪರೀಕ್ಷೆಗೆ ಆ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕಗಳು ಹಾಗೂ ಕರ್ನಾಟಕ ರಾಜ್ಯದಲ್ಲಿ ನಿಗದಿಪಡಿಸಿದ ಗರಿಷ್ಟ ಹಾಗೂ ಕನಿಷ್ಟ ಅಂಕದಲ್ಲಿ ವ್ಯತ್ಯಾಸವಿದ್ದಲ್ಲಿ ಕರ್ನಾಟಕದಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸತಕ್ಕದ್ದು.

ಇ) ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹಾ ಅವರು ಕನ್ನಡ ಭಾಷೆಯನ್ನು ಪ್ರಥಮ /ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು. ಹಾಗೂ ಮಾತೃಭಾಷೆ ಕನ್ನಡವಲ್ಲದೇ ಇರುವ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯು ಆಯ್ಕೆ ಸಮಯದಲ್ಲಿ ಸಂದರ್ಶನ ಏರ್ಪಡಿಸಿ ಹಾಗೂ ಅವಶ್ಯವಿದ್ದಲ್ಲಿ ಕನ್ನಡ ಭಾಷೆಯ ಜ್ಞಾನದ ಕುರಿತಂತೆ ಓದಿಸಿ, ಬರೆಸಿ ಅವರ ಕನ್ನಡ ಭಾಷಾ ಜ್ಞಾನವನ್ನು ಪರೀಕ್ಷಿಸಿ ಅವರನ್ನು ಆಯ್ಕೆ ಮಾಡುವ ಬಗ್ಗೆ ಸಮಿತಿಯವರು ನಿರ್ಧರಿಸುವುದು.

ಆನ್ ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು

  1. ಅರ್ಜಿ ನಿಗದಿತ ನಮೂನೆಯಲ್ಲಿ (ಆನ್ ಲೈನ್)
  2. ಜನನ ಪ್ರಮಾಣ ಪತ್ರ/ಜನ್ಮ ದಿನಾಂಕ ಇರುವ S.S.L.C.ಅಂಕಪಟ್ಟಿ
  3. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ
  4. ತಹಶೀಲ್ದಾರರು/ಉಪ ತಹಶೀಲ್ದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ
  5. ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ
  6. ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢಿಕರಣವನ್ನು ಪರಿಗಣಿಸುವಂತಿಲ್ಲ)
  7. ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ)
  8. ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು)
  9. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ, ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ
  10. ಇಲಾಖೆಯ ಸುಧಾರಣಾ ಸಂಸ್ಥೆ /ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 3 ವರ್ಷ ಸಂಸ್ಥೆಯಲ್ಲಿರಬೇಕು. ಹಾಗೂ ಈ ಬಗ್ಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ
  11. ಯೋಜನಾ ನಿರಾಶ್ರಿತರ ಬಗ್ಗೆ, ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ
  12. ಆಧಾರ್ ಕಾರ್ಡ್/ಮತದಾರರ ಗುರುತಿನ ಚೀಟಿ/ರೇಷನ್ ಕಾರ್ಡ್/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ
  13. ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸುವುದು.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು

ಪ್ರಾರಂಭ ದಿನಾಂಕ  : 11-10-2024

ಕೊನೆಯ ದಿನಾಂಕ  : 15-11-2024

ಅರ್ಜಿ ಸಲ್ಲಿಸುವ ಪ್ರಮುಖ ಲಿಂಕುಗಳು




ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು  ಇಲ್ಲಿ ಕ್ಲಿಕ್ ಮಾಡಿ




 

Leave a Reply

Your email address will not be published. Required fields are marked *