Karwar Uttara Kannada District Grama Panchayat Recruitment 2024 : ಕಾರವಾರು ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗೆ ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ
ಸೂಚನೆ :- ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಈ ಕೆಳಕಂಡ ಕೋಷ್ಠಕದಲ್ಲಿರುವ ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
ಕನಿಷ್ಠ ವಯೋಮಿತಿ | 18 ವರ್ಷಗಳು |
ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ ಗರಿಷ್ಠ | ಗರಿಷ್ಠ 35 ವರ್ಷಗಳು |
ಪ್ರವರ್ಗ- 2 (ಎ), 2 (ಬಿ), 3 (ಎ), 3 (ಬಿ), ಗೆ ಸೇರಿ ಅಭ್ಯರ್ಥಿಗಳಿಗೆ | ಗರಿಷ್ಠ 38 ವರ್ಷಗಳು |
ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ | ಗರಿಷ್ಠ 40 ವರ್ಷಗಳು |
ವಿದ್ಯಾಅರ್ಹತೆ
- ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ)ಯಲ್ಲಿ ಉತ್ತೀರ್ಣರಾಗಿರಬೇಕು
- ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸನಲ್ಲಿ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗು ಮಾನ್ಯತೆ ಪಡೆದ ಸಂಸ್ಥೆಯಿಂದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು
ಅರ್ಜಿ ಶುಲ್ಕ : ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 12, 2024
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2024
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ನಮೂನೆಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಡೆಯಬಹುದಾಗಿದ್ದು, ಭರ್ತಿ ಮಾಡಿದ ಅರ್ಜಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕಚೇರಿಗೆ ದಿನಾಂಕ ಸೆಪ್ಟೆಂಬರ್. 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಮಾಹಿತಿ ಕೇಂದ್ರ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.